ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Updated on

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ’ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾ ಸ್ಥಳದಿಂದ ಮಧ್ಯಾಹ್ನ ವಿಧಾನಸೌಧದತ್ತ ಮೆರವಣಿಗೆಯಲ್ಲಿ ಹೊರಡಲು ವಿದ್ಯಾರ್ಥಿಗಳು ನಿರ್ಧರಿಸಿದ್ದರು. ಈ ವೇಳೆ ಅವರನ್ನು ತಡೆದ ಪೊಲೀಸರು, ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದೆ. ಮೆರವಣಿಗೆಯಲ್ಲಿ ಹೋಗಲು ಅವಕಾಶವಿಲ್ಲ. ತಾವುಗಳೆಲ್ಲರೂ ವಾಪಸು ಆಗಿ ಎಂದು ಸೂಚಿಸಿದರು.

ಅದಕ್ಕೆ ವಿರೋಧ ಒಡ್ಡಿದ ವಿದ್ಯಾರ್ಥಿಗಳು, ಮೆರವಣಿಗೆ ನಡೆಸುವುದಾಗಿ ಹೇಳಿ ಮುಂದಕ್ಕೆ ಹೊರಟರು. ಈ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು, ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದರು.

ಬಳಿಕ ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಲು ಆರಂಭಿಸಿದರು. ನಂತರ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದುಕೊಂಡು ಹೋದರು. ಪೊಲೀಸರ ಈ ನಡೆಗೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com