ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,529ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 231 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,41,870ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,09,656ಕ್ಕೆ ಏರಿಕೆಯಾಗಿದೆ. ಇನ್ನು15,754 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,05,645 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 559 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.52ಕ್ಕೆ ಇಳಿದಿದೆ. ರಾಜ್ಯದ ಮೂರು ಜಿಲ್ಲೆಗ-ಬಾಗಲಕೋಟೆ, ಗದಗ, ರಾಮನಗರಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com