ಡಿಸೆಂಬರ್ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ 3 ಲಕ್ಷ ಎಲ್ಇಡಿ ಬೀದಿ ದೀಪ ಅಳವಡಿಕೆ: ಸಿಎಂ ಬೊಮ್ಮಾಯಿ ಭರವಸೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on: 

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಆರ್‌.ಮಂಜುನಾಥ್‌ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಬೀದಿ ದೀಪ ಅಳವಡಿಕೆ ಪ್ರಕ್ರಿಯೆ ಪ್ರಾರಂಭವಾಗಿ ಎರಡು ವರ್ಷಗಳು ಆಗಿವೆ. ನಿರೀಕ್ಷಿತ ಪ್ರಮಾಣದಲ್ಲಿ ಯೋಜನೆಯಲ್ಲಿ ಪ್ರಗತಿ ಆಗಿಲ್ಲ. ಇದರಿಂದಾಗಿ ನಗರದಲ್ಲಿ ಸಾಕಷ್ಟು ಕತ್ತಲು ಪ್ರದೇಶಗಳು ನಿರ್ಮಾಣವಾಗಿವೆ’ ಎಂದು ಹೇಳಿದರು.

ನಗರದಲ್ಲಿ ಈಗಿರುವ ಸೋಡಿಯಂ ದೀಪಗಳ ಬದಲು ಎಲ್‌ಇಡಿ ಬೀದಿದೀಪಗಳನ್ನು ಅಳವಡಿಸಲು ಶಾಪೂರ್ಜಿ ಪಲ್ಲೋಂಜಿ, ಎಸ್‌ಎಂಎಸ್‌ ಇನ್‌ಫ್ರಾಸ್ಟ್ರಕ್ಚರ್‌ ಮತ್ತು ಸಮುದ್ರ ಎಲೆಕ್ಟ್ರಾನಿಕ್‌ ಸಿಸ್ಟಮ್‌ ಪ್ರೈವೇಟ್‌ ಲಿಮಿಟೆಡ್‌ಗಳ ಒಕ್ಕೂಟಕ್ಕೆ (ಎಸ್ಕೊ) ಗುತ್ತಿಗೆ ನೀಡಲಾಗಿದೆ. 

ಐದು ಹಂತಗಳಲ್ಲಿ 30 ತಿಂಗಳ ಅವಧಿಯಲ್ಲಿ 4.85 ಲಕ್ಷ ಬೀದಿದೀಪ ಅಳವಡಿಸಬೇಕಿದೆ. ಮೊದಲ ಹಂತದಲ್ಲಿ 1 ಲಕ್ಷ ಬೀದಿದೀಪಗಳನ್ನು ಅಳವಡಿಸಲು ರಾಜರಾಜೇಶ್ವರಿನಗರ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯಗಳ ಮೂರು ವಾರ್ಡ್‌ಗಳು ಹಾಗೂ ಪೂರ್ವ ವಲಯದ ಒಂದು ವಾರ್ಡ್ ಆಯ್ಕೆ ಮಾಡಲಾಗಿದೆ. ಮೊದಲ ಹಂತದಲ್ಲಿ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಂಡು, ಬೇಸ್‌ಲೈನ್‌ ಸರ್ವೆ ಕಾರ್ಯಗಳು ಬಹುತೇಕ ಮುಗಿದಿವೆ’ ಎಂದರು.

‘ಗುತ್ತಿಗೆದಾರ ಕಂಪನಿ ಯೋಜನೆ ಅನುಷ್ಠಾನ ವಿಳಂಬ ಮಾಡಿದರೆ ದಂಡ ಹಾಕಲು ಅವಕಾಶ ಇದೆಯೇ’ ಎಂದು ಮಂಜುನಾಥ್‌ ಪ್ರಶ್ನಿಸಿದರು. ಉತ್ತರಿಸಿದ ಬಸವರಾಜ ಬೊಮ್ಮಾಯಿ, ಯೋಜನೆಯ ಪ್ರತಿ ವಾರದ ವಿಳಂಬಕ್ಕೆ 1 ಲಕ್ಷ ದಂಡ ರು. ವಿಧಿಸಲು ಅವಕಾಶ ಇದೆ. ಜತೆಗೆ, ಗುತ್ತಿಗೆದಾರರನ್ನು ಬದಲಿಸಲು ಹಿಂಜರಿಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. 

ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ‘3 ವರ್ಷಗಳಿಂದ ಜಾಗತಿಕ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಗುತ್ತಿಗೆದಾರ ಕಂಪನಿ ಎಲ್‌ಇಡಿ ದೀಪಗಳನ್ನು ಅಳವಡಿಸಿಲ್ಲ. ಬೇರೆ ಬೀದಿದೀಪಗಳನ್ನು ಪಾಲಿಕೆ ಹಾಕುತ್ತಿಲ್ಲ’ ಎಂದರು. ‘ಬಸವನಗುಡಿ ಕ್ಷೇತ್ರದಲ್ಲೂ ಇದೇ ಸಮಸ್ಯೆ ಆಗಿದೆ’ ಎಂದು ಬಿಜೆಪಿಯ ಎಲ್.ಎ.ರವಿಸುಬ್ರಹ್ಮಣ್ಯ ಹೇಳಿದರು. ಬಿಜೆಪಿಯ ಅರವಿಂದ ಲಿಂಬಾವಳಿ, ನಗರದ ಹೊರವಲಯದಲ್ಲಿ 14 ಕ್ಷೇತ್ರಗಳು ಇವೆ. ಇಲ್ಲಿನ 110 ಹಳ್ಳಿಗಳಲ್ಲಿ ರಸ್ತೆಗಳು ಹದಗೆಟ್ಟಿವೆ. ಜತೆಗೆ, ಬೀದಿದೀಪ ಇಲ್ಲದೆ ಸಾಕಷ್ಟು ಮಂದಿ ಬಿದ್ದು ಗಾಯಗೊಂಡಿದ್ದಾರೆ’ ಎಂದು ಗಮನ ಸೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com