ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅಂತಿಮ ದರ್ಶನ: ಪ್ಯಾಟ್ರಿಕ್ ಚರ್ಚ್ ನಲ್ಲಿ ಅಂತ್ಯಕ್ರಿಯೆ 

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಕಳೆದ ರಾತ್ರಿ ಬೆಂಗಳೂರು ತಲುಪಿದ್ದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನದವರೆಗೆ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಉಡುಪಿಯ ಚರ್ಚ್ ನಲ್ಲಿ ಅಂತಿಮ ದರ್ಶನ
ಉಡುಪಿಯ ಚರ್ಚ್ ನಲ್ಲಿ ಅಂತಿಮ ದರ್ಶನ
Updated on

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಕಳೆದ ರಾತ್ರಿ ಬೆಂಗಳೂರು ತಲುಪಿದ್ದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನದವರೆಗೆ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾಂಗ್ರೆಸ್ ವತಿಯಿಂದ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಅವರ ಅಂತಿಮ ದರ್ಶನವನ್ನು ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಮಧ್ಯಾಹ್ನ 12 ಗಂಟೆಯವರೆಗೆ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನ ಪಡೆದ ನಂತರ ಅಪರಾಹ್ನ ಹೊಸೂರು ರಸ್ತೆಯಲ್ಲಿರುವ ಪ್ಯಾಟ್ರಿಕ್ ಚರ್ಚ್ ಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಕ್ರೈಸ್ತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಕರ್ ಫರ್ನಾಂಡಿಸ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈಗಾಗಲೇ ಮಂಗಳೂರು ಹಾಗೂ ಉಡುಪಿಯಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com