ಕೋವಿಡ್-19: ರಾಜ್ಯದಲ್ಲಿಂದು 889 ಹೊಸ ಪ್ರಕರಣ ಪತ್ತೆ, 1,080 ಗುಣಮುಖ, 14 ಮಂದಿ ಸಾವು, ಐದು ಜಿಲ್ಲೆಗಳಲ್ಲಿ 'ಶೂನ್ಯ'

ರಾಜ್ಯದಲ್ಲಿ ಕೋವಿಡ್ ಲಸಿಕೆ ನೀಡಿಕೆ ಅಭಿಯಾನದಲ್ಲಿ ಅಭೂತಪೂರ್ವ ಸಾಧನೆಯಾಗಿರುವಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 889 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,91,3713ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ನೀಡಿಕೆ ಅಭಿಯಾನದಲ್ಲಿ ಅಭೂತಪೂರ್ವ ಸಾಧನೆಯಾಗಿರುವಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 889 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,91,3713ಕ್ಕೆ ಏರಿಕೆಯಾಗಿದೆ.

 889 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಸದ್ಯ 15, 755 ಸಕ್ರಿಯ ಪ್ರಕರಣಗಳಿರುವುದಾಗಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 14 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 37,587ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ  ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.63 ರಷ್ಟಿದ್ದು, ಮರಣ ಪ್ರಮಾಣ ಶೇ. 1.57 ರಷ್ಟಿದೆ.

ಬೆಂಗಳೂರಿನಲ್ಲಿ 263 ಹೊಸ ಪ್ರಕರಣಗಳು ಪತ್ತೆಯಾಗಿದ್ದು,222 ಸೋಂಕಿತರು ಗುಣಮುಖರಾಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com