ಅಕ್ಕಿ, ಗೋಧಿಯಿಂದ ಸಿರಿಧಾನ್ಯಗಳ ಕೃಷಿಗೆ ಬದಲಾಗಬೇಕು: ಶೋಭಾ ಕರಂದ್ಲಾಜೆ

ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಶೋಭಾ ಕರಂದ್ಲಾಜೆ
ಕಾರ್ಯಕ್ರಮ ಉದ್ಘಾಟಿಸಿದ ಶೋಭಾ ಕರಂದ್ಲಾಜೆ
Updated on

ಉಡುಪಿ: ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ಪ್ರಚಾರಾಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಮಳೆಯಾಧಾರಿತ ಕೃಷಿಯನ್ನು ಅವಲಂಬಿಸಿರುವ ರಾಷ್ಟ್ರವಾಗಿದ್ದು, ಇಲ್ಲಿನ ವಾತಾವರಣವು ಸಿರಿಧಾನ್ಯ ಕೃಷಿಗೆ ಸೂಕ್ತವಾಗಿದೆ. ಸಿರಿಧಾನ್ಯಗಳಲ್ಲಿ ರಾಸಾಯನಿಕ ಅಂಶಗಳು ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟಿನ್, ವಿಟಮಿನ್
ಅಂಶಗಳಿದ್ದು, ಮಧುಮೇಹ ನಿಯಂತ್ರಣ ಸೇರಿದಂತೆ ಹಲವು ಸಮಸ್ಯೆಗಳಿಗೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.  

ಅಲ್ಲದೇ ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೆಳವಣಿಗೆಗೆ ಪೂರಕವಾಗಿದೆ. ಭಾರತದ ಬೇಡಿಕೆಯಂತೆ ವಿಶ್ವಸಂಸ್ಥೆಯು 2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿ ಘೋಷಿಸಿದ್ದು, ಈ ಅವಧಿಯಲ್ಲಿ ದೇಶದಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆದು, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು ಮಾಡುವ ಮೂಲಕ ರೈತರು ಹೆಚ್ಚಿನ ಆದಾಯಗಳಿಸುವುದರ ಜೊತೆಗೆ, ದೇಶವು ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗುವಂತಾಗಬೇಕು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com