ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 783 ಪ್ರಕರಣ ಪತ್ತೆ, 16 ಸಾವು, 5 ಜಿಲ್ಲೆಗಳಲ್ಲಿ ಪ್ರಕರಣ ಶೂನ್ಯ!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 783 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,96,7866ಕ್ಕೆ ಏರಿಕೆಯಾಗಿದೆ. 1,139 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 783 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,96,7866ಕ್ಕೆ ಏರಿಕೆಯಾಗಿದೆ. 1,139 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.  

ಗುಣಮುಖರಾದವರ ಒಟ್ಟು ಸಂಖ್ಯೆ 2,91,4852ಕ್ಕೆ ಏರಿಕಯಾಗಿದೆ. ರಾಜ್ಯದಲ್ಲಿ ಸದ್ಯ 15, 383 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 37603ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸೋಂಕಿನ ಶೇಕಡಾವಾರು ಪ್ರಮಾಣ ಶೇಕಡಾ 0. 60 ರಷ್ಟಿದ್ದು, ಮರಣ ಪ್ರಮಾಣ ಶೇ. 2.04 ರಷ್ಟಿದೆ. 

ಬೆಂಗಳೂರಿನಲ್ಲಿ 267 ಹೊಸ ಪ್ರಕರಣ ಪತ್ತೆಯಾಗಿದ್ದು, 277 ಸೋಂಕಿತರು ಗುಣಮುಖರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com