ಮುಖ್ಯಮಂತ್ರಿ ಬೊಮ್ಮಾಯಿಗೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬಂಧನ

ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಮಂಗಳೂರು: ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮೈಸೂರಿನಲ್ಲಿ ದೇಗುಲ ತೆರವು ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಧರ್ಮೇಂದ್ರ, ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ, ಗಾಂಧಿ ಹತ್ಯೆ ಮಾಡಲಿಕ್ಕಾಗುತ್ತದೆ ಎಂದಾದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚನೆ ಮಾಡಲು ಸಾಧ್ಯವಿಲ್ಲ ಎನ್ನುತ್ತೀರಾ’ ಎಂದು ಪ್ರಶ್ನಿಸಿದ್ದರು.

ಧರ್ಮೇಂದ್ರ ವಿರುದ್ಧ ಬೆಂಗಳೂರಿನ ಲೋಹಿತ್ ಕುಮಾರ್ ಸುವರ್ಣ ಎಂಬುವರು ಮಂಗಳೂರಿನ ಬರ್ಕೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಆ ಬಳಿಕ ಧರ್ಮೇಂದ್ರ ವಿಡಿಯೊ ಮೂಲಕ ‘ಗಾಂಧಿ ಹತ್ಯೆ’ ಎಂಬ ಪದ ಬಳಕೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ್ದರು. 

ಸಂಸ್ಥೆಯಿಂದ ಹೊರಹಾಕಲ್ಪಟ್ಟ ರಾಜೇಶ್ ಮತ್ತು ಧರ್ಮೇಂದ್ರ ಮತ್ತು ಸಂದೀಪ್ ಅವರು ಮಹಾಸಭಾದ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಮಾಹಿತಿಯನ್ನು ಹರಡುತ್ತಿದ್ದರು. ಅವರು ಸಂಸ್ಥೆಯ ಲೆಟರ್‌ಹೆಡ್ ಬಳಸಿ  ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ, ಸೌಹಾರ್ದತೆಗೆ ಭಂಗ ತರಲು ಪಿತೂರಿ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಧರ್ಮೇಂದ್ರ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿದೆ  ಹಾಗೂ ಹಿಂದೂ ಮಹಾಸಭಾದ ಎಂಟು ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com