ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರದ ಆದೇಶ: ಶ್ರೀರಾಮುಲು

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ  ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. 
ಶ್ರೀರಾಮುಲು
ಶ್ರೀರಾಮುಲು
Updated on

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ  ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. 

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನು ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಏಪ್ರಿಲ್​ನಲ್ಲಿ ಮುಷ್ಕರ ನಡೆಸಿದ್ದರು. ಮುಷ್ಕರದಲ್ಲಿ ಭಾಗಿಯಾಗಿದ್ದ 4,200 ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com