ಕೋವಿಡ್-19: ರಾಜ್ಯದಲ್ಲಿ ಇಂದು 847 ಹೊಸ ಸೋಂಕು ಪ್ರಕರಣಗಳು ಪತ್ತೆ, 20 ಮಂದಿ ಸಾವು

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರದ ಸರಾಸರಿ ಮುಂದುವರೆದಿದ್ದು, ಇಂದೂ ಕೂಡ 800 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಕೋವಿಡ್-19
ಭಾರತದಲ್ಲಿ ಕೋವಿಡ್-19
Updated on: 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರದ ಸರಾಸರಿ ಮುಂದುವರೆದಿದ್ದು, ಇಂದೂ ಕೂಡ 800 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 847 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29, 70, 208ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಒಟ್ಟು 20 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 37,668ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 946 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 29, 18, 890ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 13, 621 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದಿನ ಸೋಂಕು ಸಕರಾತ್ಮಕ ಪ್ರಮಾಣ ಶೇ.0.57ಯಷ್ಟಿದ್ದು, ಸಾವಿನ ದರ ಶೇ.2.36ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com