ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಕಿಂಗ್‌ ಪಿನ್ ಬಂಧನ

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಬ್ರೇಜ್ (35) ಎಂದು ಗುರ್ತಿಸಲಾಗಿದೆ. ಬಂಧಿತ ಆರೋಪಿ ವಾಟ್ಸಾಪ್​ ಗ್ರೂಪ್​ಗಳ ಮೂಲಕ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆಗೆ ಪ್ರಚೋದನೆ ನೀಡಿದ್ದನೆಂದು ತಿಳಿದುಬಂದಿದೆ. 

ಗಲಭೆ ವೇಳೆ ಪೊಲೀಸ್ ವಾಹನ ಸೇರಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈತನ ಹೆಸರು ಪ್ರಕರಣದ ಚಾರ್ಜ್‌ಶೀಟ್‌ನಲ್ಲೂ ನಮೂದಾಗಿತ್ತು. ಪ್ರಕರಣದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದನು. ತಾಂತ್ರಿಕ ಮಾಹಿತಿ ಆಧರಿಸಿ ಈತನನ್ನು ಸೆ. 20ರಂದು ತನಿಖಾಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ಸಂಗಾಯ್ ಪುರ ವಾರ್ಡ್ ನಲ್ಲಿ ಸಕ್ರಿಯ ಎಸ್'ಡಿಪಿಐ ಸದಸ್ಯನಾಗಿದ್ದ ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com