
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.
ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗಲು ಯುವತಿ ನಗರದ ಹೆಚ್ಎಸ್ಆರ್ ಲೇಔಟ್ನಿಂದ ಮುರುಗೇಶಪಾಳ್ಯಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಹೀಗಾಗಿ ಹೆಚ್ಎಸ್ಆರ್ ಲೇಔಟ್ಗೆ ಬಂದು ಯುವತಿ ಕರೆದೊಯ್ದ ಚಾಲಕ, ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement