ಬಿ ವೈ ರಾಘವೇಂದ್ರ
ಬಿ ವೈ ರಾಘವೇಂದ್ರ

ಭದ್ರಾವತಿ ಕಬ್ಬಿಣ ಕಾರ್ಖಾನೆ, ಮೈಸೂರು ಪೇಪರ್ ಮಿಲ್ಸ್ ಶೀಘ್ರವೇ ಪುನರಾರಂಭ: ಬಿವೈ ರಾಘವೇಂದ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಪುನರಾರಂಭಿಸುವ ಪ್ರಸ್ತಾವನೆಗೆ ನೀತಿ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಬಿಜೆಪಿ ಸಂಸದ ಬಿವೈ ರಾಘವೇಂದ್ರ...

ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಪುನರಾರಂಭಿಸುವ ಪ್ರಸ್ತಾವನೆಗೆ ನೀತಿ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.

ಮೈಸೂರು ಪೇಪರ್ ಮಿಲ್ಸ್(ಎಂಪಿಎಂ) ಸಹ ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ರಾಘವೇಂದ್ರ ಅವರು ಬುಧವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆಗಳ ಕೇಂದ್ರ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟ ಜಂಟಿಯಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಫ್ತುದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಘವೇಂದ್ರ ಅವರು. 

"ನಾವು ವಿಐಎಸ್ಎಲ್ ಮತ್ತು ಎಂಪಿಎಂ ಅನ್ನು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.

ಈ ಸಂಬಂಧ ನಾವು ಅನೇಕ ಸಭೆಗಳನ್ನು ನಡೆಸಿದ್ದೇವೆ. ನೀತಿ ಆಯೋಗ ಸಹ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಇದರಿಂದ ಜಿಲ್ಲೆಯಲ್ಲಿ ಕೃಷಿ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇಲ್ಲಿಯವರೆಗೆ, 20,294 ಕೈಗಾರಿಕಾ ಘಟಕಗಳು ರೂ.2,646 ಕೋಟಿ ಹೂಡಿಕೆ ಮಾಡಿವೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಅವರು ಹೇಳಿದರು.

"ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ಸೇರಿಸಲು ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ರಸ್ತೆ, ರೈಲ್ವೆ ಮತ್ತು ವಿಮಾನ ಸಂಪರ್ಕವನ್ನು ಸುಧಾರಿಸಲಾಗುತ್ತಿದೆ. ಬೆಂಗಳೂರಿನ ನಂತರ, ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ 3,200 ಮೀಟರ್ ಉದ್ದದ ಎರಡನೇ ರನ್ ವೇ ಆಗಿದೆ. ಮುಂದಿನ ವರ್ಷದ ಜೂನ್ ವೇಳೆಗೆ ವಿಮಾನ ನಿಲ್ದಾಣದ ಕೆಲಸ ಪೂರ್ಣಗೊಳ್ಳುವ ನಿರೀಕ್ಷೆಯಿದೆ”ಎಂದು ಅವರು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com