ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಪಂಚಮಸಾಲಿ ಸಮುದಾಯದ ಆಗ್ರಹ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 
Published on

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ 3 `ಬಿ'ಯಲ್ಲಿದ್ದು, ಆ ಸಮುದಾಯವನ್ನು ಪ್ರವರ್ಗ 2 `ಎ'ಗೆ ಸೇರ್ಪಡೆಗೆ ಬೇಡಿಕೆ ಬಂದಿದೆ. ಪಂಚಮಸಾಲಿ ಸಮಯದಾಯ ಅಲ್ಲದೆ 15 ಸಮುದಾಯಗಳು ಮೀಸಲಾತಿ ಬಗ್ಗೆ ಬೇಡಿಕೆ ಇಟ್ಟಿವೆ. ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆಯನ್ನು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲಾಗಿದೆ. ಆಯೋಗ ಆ ಸಮುದಾಯದ ಶೈಕ್ಷಣಿಕ ಮತ್ತು ಉದ್ಯೋಗ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯನ್ನು ತಯಾರಿಸುವ ಹಕ್ಕನ್ನು ರಾಜ್ಯಗಳಿಗೆ ಮರಳಿಸುವ ಸಂವಿಧಾನ ತಿದ್ದುಪಡಿ ತಂದಿದೆ. ಅದರನ್ವಯ ಒಬಿಸಿ ಮೀಸಲಾತಿ ಪಟ್ಟಿ ತಯಾರಿಸುವ ಅಧಿಕಾರ ರಾಜ್ಯ ಹಿಂ.ವರ್ಗಗಳ ಆಯೋಗಕ್ಕೆ ವರ್ಗಾವಣೆಯಾಗಿದೆ. ಆಯೋಗ ಸಂಪೂರ್ಣ ಮಾಹಿತಿ ಸಂಗ್ರಹಣೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. 

ಮಹಾರಾಷ್ಟ್ರದ ಮರಾಠ ಮೀಸಲಾತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಆ ಹಿನ್ನೆಲೆಯಲ್ಲಿ ಆಯೋಗ ಪರಿಶೀಲನೆ ನಡೆಸಬೇಕಾಗಿದೆ. ಇಂದಿರಾ ಸಹಾನಿ ಮಾರ್ಗಸೂಚಿ ಪ್ರಕಾರ ಮೀಸಲಾತಿ ನೀಡುವ ಬಗ್ಗೆ ಕೆಲಸ ನಡೆಯುತ್ತಿದೆ. ರಾಜ್ಯ ಹಿಂ.ವರ್ಗಗಳ ಆಯೋಗದ ವರದಿ ಬಂದ ಬಳಿಕ ಪರಿಶೀಲನೆ ಮಾಡಿ ಸರ್ಕಾರ ಮುಂದಿನ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಆಡಳಿತಾರೂಢ ಪಕ್ಷದ ಶಾಸಕರಾಗಿ ಇಬ್ಬರು ನಾಯಕರು ಸದನದ ಬಾವಿಗಿಳಿದು ಸರ್ಕಾರವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸರ್ಕಾರವನ್ನು ಮುಜುಗರಕ್ಕೊಳಗಾಗುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com