ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾವೇರಿ ತೀರ್ಥೋದ್ಭವಕ್ಕೆ ಕೋವಿಡ್ ಆತಂಕ: 2 ತಿಂಗಳು ಕೊಡಗು ಪ್ರವಾಸೋದ್ಯಮ ನಿಷೇಧಿಸಲು ಆಗ್ರಹ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾರ್ಗಸೂಚಿಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ.
Published on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾರ್ಗಸೂಚಿಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ವಾರಾಂತ್ಯಗಳಲ್ಲಿ ಕೊಡಗು ಜಿಲ್ಲೆಗೆ ಹೆಚ್ಚು ಪ್ರವಾಸಿಗರು ಅಗಮಿಸುತ್ತಿದ್ದಾರೆ.

ಇದರಿಂದ ಪ್ರವಾಸೋದ್ಯಮ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವವರು ಚೇತರಿಕೆ ಕಾಣ್ಣುತ್ತಿದ್ದರೆ, ಇದೀಗ ಕೊಡಗು ಜಿಲ್ಲೆಯ ಜನ ಎರಡು ತಿಂಗಳ ಕಾಲ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಶುಕ್ರವಾರ ಕೊಡಗಿನ ಜನ, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರನ್ನು ಒಳಗೊಂಡ 'ಸೇವ್ ಕೊಡಗು ಫ್ರಮ್ ಟೂರಿಸ್ಟ್' ತಂಡ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ನೀಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕೊಡಗಿನ ಸಾಂಪ್ರದಾಯಿಕ ಹಬ್ಬ ತುಲಾ ಸಂಕ್ರಮಣ ಆಚರಣೆಯ ಹಿತದೃಷ್ಟಿಯಿಂದ ಹಾಗೂ ಶಾಲಾ- ಕಾಲೇಜುಗಳ ಪುನರಾರಂಭದ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಕಠಿಣ ನಿಯಮವನ್ನು ಜಾರಿಗೊಳಿಸಬೇಕೆಂದು ತಂಡ ಒತ್ತಾಯಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com