ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ

ರಾಜ್ಯದ ಹಲವೆಡೆ ಇನ್ನೂ ಕೆಲದಿನಗಳ ಮಟ್ಟಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ ಕೆಲದಿನಗಳ ಮಟ್ಟಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ

ಇಲಾಖೆಯ ಮುನ್ಸೂಚನೆ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡದಲ್ಲಿ ಮಳೆಯಾಗಲಿದ್ದು, ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಮಳೆ ಮುಂದುವರೆಯಲಿದೆ. ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ.27 ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳಿಂದ ಕೊಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com