ಬೆಂಗಳೂರು: ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣನವರ್, ಮಕ್ಕಿಮನೆ ಎಂ. ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವ ಕುಮಾರ್, ಪದ್ಮರಾಜ್ ನೇಮಿಚಂದ್ರ ದೇಸಾಯಿ, ಪಿ. ಕೃಷ್ಣಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement