ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಇ- ಗ್ರಂಥಾಲಯ ಉದ್ಘಾಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಇ- ಗ್ರಂಥಾಲಯ ಉದ್ಘಾಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿಂದು ದೇಶಭಕ್ತ ರವೀಂದ್ರ ಕೌಶಿಕ್ ಅವರ ಹೆಸರಿನಲ್ಲಿ ಇ- ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ  ಎಂದರು. 

ಜ್ಞಾನ ನೀಡುವುದು  ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು ಬದುಕಿಗೆ ಸಾರ್ಥಕತೆ ಕೊಡುವ, ಅರ್ಥವನ್ನು ಕೊಡುವ, ಪರೋಪಕಾರ ಮಾಡುವ ಗುಣವನ್ನು ಕೊಡುವ ಪ್ರಮುಖ ಮಾರ್ಗವಾಗಿದೆ. ಜ್ಞಾನ ಮತ್ತು ಧ್ಯಾನಗಳನ್ನು ಪಡೆದು ಅದನ್ನು ಸಮಾಜಕ್ಕೆ ಹಂಚಬೇಕು ಎಂಬ ಕೆಲಸವನ್ನು ಗ್ರಂಥಾಲಯ ಮಾಡುತ್ತದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com