ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ 6 ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.
Published on

ಹುಬ್ಬಳ್ಳಿ: ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ ರಾಜ್ಯದ ಏಕೈಕ ಎಫ್‌ಎಸ್‌ಐಎಲ್ ಆಗಿರುವುದರಿಂದ ಬಹಳಷ್ಟು ಪ್ರಕರಣಗಳ ಸರದಿಯಲ್ಲಿರುವುದರಿಂದ ತನಿಖೆ ವಿಳಂಬವಾಗುತ್ತಿದೆ. ಹೀಗಾಗಿ ಈ ಒತ್ತಡವನ್ನು ಕಡಿಮೆಗೊಳಿಸಿ ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ಆರು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಕಸಬಾಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಆಯೋಜಿಸಿರುವ “ಕಸಬಾ ಪೇಟೆ ಪೊಲೀಸ್ ಠಾಣೆಯ ನೂತನ ಕಟ್ಟಡ ಕಾಮಗಾರಿ”ಗೆ, “ಹುಬ್ಬಳ್ಳಿ-ಧಾರವಾಡ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಕಾಮಗಾರಿ”ಗೆ, “ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸ್ ಠಾಣೆಯ ನೂತನ ಕಟ್ಟಡದ ಕಾಮಗಾರಿ”ಗೆ, “ಧಾರವಾಡ ಜಿಲ್ಲೆಯಲ್ಲಿ 4 ಡಾಗ್ ಕೆನಲ್” ಹಾಗೂ “ಹುಬ್ಬಳ್ಳಿ-ಧಾರವಾಡ ನಗರದಲ್ಲಿ 2 ಡಾಗ್ ಕೆನಲ್‍ಗಳ ನಿರ್ಮಾಣ ಕಾಮಗಾರಿ”ಗೆ ಚಾಲನೆ ನೀಡಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ. ಅದರಂತೆ ಮೊದಲ ಹಂತದಲ್ಲಿ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಲ್ಯಾಬ್‌ಗಳನ್ನು ತೆರೆಯುವುದಾಗಿ ಸ್ಪಷ್ಟಪಡಿಸಿದರು. 

ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಾಸಕ ಅರವಿಂದ್ ಬೆಲ್ಲದ್ ಮತ್ತಿತರರು ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com