ನಂಜನಗೂಡು ದೇವಾಲಯ ತೆರವು ವಿವಾದ: ತಹಶೀಲ್ದಾರ್ ವರ್ಗಾವಣೆ

ಉಚ್ಚಗಣಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಗ್ರಾಮದೇವತೆ ಮಹದೇವಮ್ಮ ದೇವಾಲಯ ಧ್ವಂಸ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ, ನಂಜನಗೂಡು ತಹಶೀಲ್ದಾರ್ ಮೋಹನಕುಮಾರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 
ದೇವಾಲಯ ತೆರವು (ಸಂಗ್ರಹ ಚಿತ್ರ)
ದೇವಾಲಯ ತೆರವು (ಸಂಗ್ರಹ ಚಿತ್ರ)

ಮೈಸೂರು: ಉಚ್ಚಗಣಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಗ್ರಾಮದೇವತೆ ಮಹದೇವಮ್ಮ ದೇವಾಲಯ ಧ್ವಂಸ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ, ನಂಜನಗೂಡು ತಹಶೀಲ್ದಾರ್ ಮೋಹನಕುಮಾರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ನಂಜನಗೂಡು ತಹಶೀಲ್ದಾರ್ ಹುದ್ದೆಗೆ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ತಾಲ್ಲೂಕಿನ ಉಚ್ಚಗಣಿ ಮಹದೇವಮ್ಮ ದೇಗುಲವನ್ನು ಕೆಡವಿದ ಮೇಲೆ ಧಾರ್ಮಿಕ ಭಾವನೆಗಳಿಗೆ ಭಂಗ ತಂದಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು.

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯ ತೆರವು ಮಾಡಿದ್ದು ದೊಡ್ಡ ವಿವಾದವಾಗಿತ್ತು, ರಾಜ್ಯಾದ್ಯಂತ ಸುದ್ದಿಯಾಗಿತ್ತು. ಈಗ ಸರ್ಕಾರ ನಂಜನಗೂಡು ತಹಶೀಲ್ದಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಜನರ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದೆ.

ಸೋಮವಾರ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಬಳಿಕ ತಹಶೀಲ್ದಾರ್ ಹುದ್ದೆಯನ್ನು ಖಾಲಿ ಬಿಟ್ಟಿದ್ದು, ಯಾರನ್ನೂ ಸಹ ಹೊಸದಾಗಿ ನೇಮಕ ಮಾಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com