ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಬಾಲ ಸನ್ಯಾಸವನ್ನು ನಿರ್ಬಂಧಿಸುವಂತಹ ಯಾವುದೇ ನಿಯಮಗಳು ಅಥವಾ ಶಾಸನಗಳಿಲ್ಲ. ಇನ್ನು ಪ್ರಕರಣದಲ್ಲಿ ಅಪ್ರಾಪ್ತನ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ವಿಫಲರಾಗಿದ್ದಾರೆ. 800 ವರ್ಷಗಳಿಗೂ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಪ್ರಾಪ್ತ ಪೀಠಾಧಿಪತಿ ನೇಮಕ ಮಾಡಿದನ್ನು ಪ್ರಶ್ನಿಸಿ ಶಿರೂರು ಮಠದ ಭಕ್ತರಾದ ಲಾತವ್ಯ ಆಚಾರ್ಯ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಸಿಜೆ ಎಸ್.ಸಿ ಶರ್ಮಾ ನೇತೃತ್ವದ ವಿಭಾಗೀಯ ಕಳೆದ ಶುಕ್ರವಾರ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಪೀಠ, ಬೌದ್ಧ ಧರ್ಮದಲ್ಲಿಯೂ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ನೀಡಲಾಗುತ್ತದೆ. 18 ವರ್ಷ ತುಂಬುವ ಮೊದಲು ಸನ್ಯಾಸ ಸ್ವೀಕರಿಸಬಾರದು ಎಂದು ನಿರ್ಧರಿಸುವ ಯಾವುದೇ ಕಾನೂನು ಅಥವಾ ಶಾಸನಾತ್ಮಕ ನಿಯಮಗಳಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಪರಿಗಣಿಸಲಾಗದು ಎಂದು ಪೀಠ ತಿಳಿಸಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com