ಹೊಸಪೇಟೆ: ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ನಿರ್ದೇಶಕರು ಸೇರಿ ನಾಲ್ವರ ದುರ್ಮರಣ

ಎರಡು ಇನೋವಾ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. 

Published: 01st April 2021 04:45 PM  |   Last Updated: 01st April 2021 04:55 PM   |  A+A-


Car Accident

ಕಾರು ಅಪಘಾತ

Posted By : Vishwanath S
Source : Online Desk

ಹೊಸಪೇಟೆ: ಎರಡು ಇನೋವಾ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. 

ಕುಷ್ಟಗಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿಕೊಂಡು ಮತ್ತೊಂದು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಅಧಿಕಾರಿಗಳಿದ್ದ ಇನೋವಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

ಮೃತರನ್ನು ನೀರಾವರಿ ಆಯೋಗದಲ್ಲಿ ನಿರ್ದೇಶಕರಾಗಿರುವ 50 ವರ್ಷದ ರಾಮಸ್ವಾಮಿ, ಜಿತೇಂದ್ರ(50), ಕಾವ್ಯ(ತಿಪಟೂರು) ಮತ್ತು 10 ವರ್ಷದ ಶರಣಬಸವ ಎಂದು ಗುರುತಿಸಲಾಗಿದೆ.

700

ಅಪಘಾತದಲ್ಲಿ ಗಾಯಗೊಂಡವರು ಸರ್ಕಾರಿ ಇನೋವಾ ಕಾರಿನ ಚಾಲಕ ಅನ್ವರ್, ಚಾಲಕ ಗಿರೀಶ್, ಮಂಜುಶ್ರೀ, ಶಿವಲೀಲಾ, ಸಿದ್ದಲಿಂಗೇಶ್ ಮತ್ತು ಸುವರ್ಣ ಎಂದು ತಿಳಿದುಬಂದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮರಿಯಮ್ಮನಹಳ್ಳಿಯ ಹಾರುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp