ಸರಿಯಾಗಿ ಮಾಸ್ಕ್ ಧರಿಸದವರ ವಿರುದ್ಧ ದಂಡಾಸ್ತ್ರ ಪ್ರಯೋಗಕ್ಕೆ ನಮ್ಮ ಮೆಟ್ರೋ ಮುಂದು: 250 ರೂ. ದಂಡ!

ಮೆಟ್ರೋ ರೈಲು ಹಾಗೂ ನಿಲ್ದಾಣಕ್ಕೆ ಬರುವ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವ ಕುರಿತು ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಆರ್'ಸಿಎಲ್, ಇದೀಗ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. 

Published: 01st April 2021 09:11 AM  |   Last Updated: 01st April 2021 12:42 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಮೆಟ್ರೋ ರೈಲು ಹಾಗೂ ನಿಲ್ದಾಣಕ್ಕೆ ಬರುವ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವ ಕುರಿತು ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಆರ್'ಸಿಎಲ್, ಇದೀಗ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. 

ಮೆಟ್ರೋ ನಿಲ್ದಾಣ ಹಾಗೂ ರೈಲಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸುವವರಿಗೆ ರೂ.250 ದಂಡ ವಿಧಿಸಲು ನಮ್ಮ ಮೆಟ್ರೋ ಮುಂದಾಗಿದೆ. 

ಬಿಎಂಆರ್'ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಅವರು ಮಾತನಾಡಿ, ವಾರಗಳ ಹಿಂದಿನಿಂದಲೂ ಮೆಟ್ರೋ ನಿಲ್ದಾಣ ಹಾಗೂ ರೈಲಿನಲ್ಲಿ ಕೊರೋನಾ ನಿಯಮಗಳನ್ನು ಪಾಲನೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತಲೇ ಇದ್ದೇವೆ. ಇದೀಗ ನಿಯಮ ಉಲ್ಲಂಘಿಸುವವರಿಗೆ ರೂ.250 ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ನಿಮಯ ಉಲ್ಲಂಘಿಸುವವರ ಮೇಲೆ ಕಣ್ಗಾವಲಿಸಲು ಈಗಾಗಲೇ ಮೂರು ಸದಸ್ಯರ ಭದ್ರತಾ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಬಿಎಂಆರ್'ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಎ.ಎಸ್.ಶಂಕರ್ ಅವರು ಮಾತನಾಡಿ, ರೈಲು ಹಾಗೂ ನಿಲ್ದಾಣದಲ್ಲಿ ಮಾಸ್ಕ್ ಧರಿಸಿರುವ ಬಹುತೇಕ ಮಂದಿ ಮಾಸ್ಕ್ ಗಳನ್ನು ಸೂಕ್ತ ರೀತಿಯಲ್ಲಿ ಧರಿಸಿರುವುದಿಲ್ಲ. ಮೂಗಿನ ಕೆಳಗೆ ಮಾಸ್ಕ್ ಹಾಕಿರುತ್ತಾರೆ. ಎಲ್ಲಾ ಹಿತಾಸಕ್ತಿ ದೃಷ್ಟಿಯಿಂದ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಳ್ಳುತ್ತೇವೆ. ಇದಲ್ಲದೆ, ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ಇತರೆ ಪ್ರಯಾಣಿಕರಿಗೂ ಸಮಸ್ಯೆಯನ್ನು ಎದುರು ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಈ ವರೆಗೂ ನಿಯಮ ಉಲ್ಲಂಘಿಸಿದ ಎಷ್ಟು ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾವು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಇದೀಗ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಕಾರ್ಯವನ್ನೂ ಆರಂಭಿಸಲಾಗಿದೆ ಎಂದಿದ್ದಾರೆ. 


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp