ಅನಾರೋಗ್ಯ ಸಮಸ್ಯೆ: ಎಸ್ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಗೈರು
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಗೈರಾಗಿದ್ದಾರೆ.
Published: 02nd April 2021 04:01 PM | Last Updated: 02nd April 2021 04:01 PM | A+A A-

ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಗೈರಾಗಿದ್ದಾರೆ.
ಈ ಕುರಿತು ರಮೇಶ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಅವರಿಗೆ ಆರೋಗ್ಯ ಸಮಸ್ಯೆಯಾಗಿದ್ದರಿಂದ ಇಂದು ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದರು.
ಈ ವಿಚಾರವನ್ನು ಈಗಾಗಲೇ ಎಸ್ಐಟಿ ತನಿಖಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಎರಡು ದಿನ ಕಾಲಾವಕಾಶ ಕೇಳಲಾಗಿದೆ. ಅವರು ಮತ್ತೊಮ್ಮೆ ನೋಟಿಸ್ ನೀಡುವುವುದಾಗಿ ತಿಳಿಸಿದ್ದಾರೆ ಎಂದರು.
ಜಾರಕಿಹೊಳಿ ಅವರಿಗೆ ಯಾವುದೇ ಬಂಧನದ ಭೀತಿ ಇಲ್ಲ. ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಅಷ್ಟೇ ಎಂದರು.
ಸದ್ಯ ಅವರು ಗೋಕಾಕ್ನಲ್ಲಿಯೇ ಇದ್ದಾರೆ. ಬೇರೆಲ್ಲೂ ತೆರಳಿಲ್ಲ ಎಂದು ಶ್ಯಾಮ್ ಸುಂದರ್ ತಿಳಿಸಿದರು.