ನನ್ನ ಗಮನಕ್ಕೆ ಬಾರದೆ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ; ನಾನು ರೆಬೆಲ್ ಅಲ್ಲ, ಲಾಯಲ್: ಕೆ.ಎಸ್. ಈಶ್ವರಪ್ಪ 

ನನ್ನ ಗಮನಕ್ಕೆ ತಾರದೆ ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸಕ್ಕೆ ಸಿಎಂ ಬಿ ಎಸ್ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡಿದ್ದಾರೆ, ಅದರ ಬಗ್ಗೆ ನನಗೆ ಅಸಮಾಧಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

Published: 02nd April 2021 01:20 PM  |   Last Updated: 02nd April 2021 02:18 PM   |  A+A-


K S Eshwarappa

ಕೆ ಎಸ್ ಈಶ್ವರಪ್ಪ

Posted By : Sumana Upadhyaya
Source : Online Desk

ಮೈಸೂರು: ನನ್ನ ಗಮನಕ್ಕೆ ತಾರದೆ ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸಕ್ಕೆ ಸಿಎಂ ಬಿ ಎಸ್ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡಿದ್ದಾರೆ, ಅದರ ಬಗ್ಗೆ ನನಗೆ ಅಸಮಾಧಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪನವರು ತಮ್ಮ ಇಲಾಖೆಯ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಎರಡು ದಿನಗಳ ಹಿಂದೆ ರಾಜ್ಯಪಾಲರಿಗೆ ಮತ್ತು ಹೈಕಮಾಂಡ್ ಗೆ ಪತ್ರದಲ್ಲಿ ಆರೋಪಿಸಿ ಸುದ್ದಿಯಾಗಿದ್ದಾರೆ. ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿದೆ. ಸಿಎಂ ಯಡಿಯೂರಪ್ಪನವರ ಆಡಳಿತ ವೈಖರಿ ಹಲವು ಸಚಿವರು, ಶಾಸಕರಿಗೇ ಸಮಾಧಾನವಾಗುತ್ತಿಲ್ಲ ಎಂಬುದು ಇದರಿಂದ ತಿಳಿಯುತ್ತಿದೆ.

ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆ ಎಸ್ ಈಶ್ವರಪ್ಪ, ಮುಖ್ಯಮಂತ್ರಿಗಳು ಇಲಾಖೆಯ ಕೆಲಸಗಳಿಗೆ ನಿಯಮಾನುಸಾರ ಅನುದಾನ ನೀಡಲಿ, ಆದರೆ ನನ್ನ ಗಮನಕ್ಕೆ ಬಾರದೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಒಂದಕ್ಕೇ 65 ಕೋಟಿ ಬಿಡುಗಡೆ ಮಾಡಿದ್ದಾರೆ. ಹೀಗೆ ವಿವಿಧ ಕಾಮಗಾರಿ, ಇಲಾಖೆಯ ಕೆಲಸಗಳಿಗೆಂದು ಒಟ್ಟು 1,291 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ ಎಂದು ಹಣಕಾಸು ಸಚಿವಾಲಯದಿಂದ ಮಾಹಿತಿ ಸಿಕ್ಕಿದೆ. ನನ್ನ ಇಲಾಖೆಯಲ್ಲಿ ನಡೆಯುತ್ತಿರುವ ಕೆಲಸಗಳು ನನಗೆ ಗೊತ್ತಾಗಬೇಕು, ನಾನು ಪೋಸ್ಟ್ ಮ್ಯಾನ್ ಅಲ್ಲ, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಬರೆದಿದ್ದೆ, ಅದಕ್ಕೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. 

ನಾನು ರೆಬೆಲ್ ಅಲ್ಲ, ಲಾಯಲ್: ಸಿಎಂ ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಪತ್ರ ಬರೆದಿದ್ದೇನೆಯೇ ಹೊರತು ಇದರಲ್ಲಿ ವೈಯಕ್ತಿಕ ಕಾರಣಗಳಿಲ್ಲ, ಸಿಎಂ ವಿರುದ್ಧ ರೆಬೆಲ್ ಆಗಲ್ಲ, ನಾನು ಲಾಯಲ್, ಬಿಜೆಪಿ ಪಕ್ಷ ನನಗೆ ತಾಯಿ ಇದ್ದ ಹಾಗೆ, ನನ್ನ ವಿರುದ್ಧ ಕೆಲವು ಶಾಸಕರು, ಸಚಿವರು ಸಹಿ ಸಂಗ್ರಹ ಮಾಡಿ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ, ಇದಕ್ಕೆಲ್ಲಾ ಜಗ್ಗುವ, ಬಗ್ಗುವವನಲ್ಲ ನಾನು ಎಂದು ಈಶ್ವರಪ್ಪ ಹೇಳಿದ್ದಾರೆ. 

ನಾನು ಸಂಘಟನೆಯಿಂದ ಬಂದವನು, ನನಗೆ ಬಿಜೆಪಿ ಪಕ್ಷ ಮುಖ್ಯ, ಪಕ್ಷ ತಪ್ಪುದಾರಿಯಲ್ಲಿ ಹೋಗುತ್ತಿದೆ ಎಂದು ಗೊತ್ತಾದಾಗ ಎಚ್ಚರಿಸಿ ಸರಿದಾರಿಗೆ ತರಲು ಪ್ರಯತ್ನ ಮಾಡುವುದು ನನ್ನ ಕರ್ತವ್ಯ. ಹೀಗಾಗಿ ಪಕ್ಷ ಉಳಿಸುವ ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ಯಾರೂ ಕ್ರಮ ಜರುಗಿಸಲು ಸಾಧ್ಯವಿಲ್ಲ. ಪಕ್ಷ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ತೆಗೆದುಕೊಳ್ಳಲಿ ಎಂದರು. 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp