ಮಳೆಗಾಲದಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ರಾಕೇಶ್ ಸಿಂಗ್ ಸೂಚನೆ

ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಜೊತೆಗೆ ಮುಂಬರುವ ಮಳೆಗಾಲದಲ್ಲಿ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. 

Published: 04th April 2021 02:08 PM  |   Last Updated: 04th April 2021 02:08 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಜೊತೆಗೆ ಮುಂಬರುವ ಮಳೆಗಾಲದಲ್ಲಿ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. 

ಕೋವಿಡ್ ನಿಯಂತ್ರಣ, ಮಳೆಗಾಲಕ್ಕೆ ಮಾಡಿಕೊಳ್ಳಬೇಕಾದ ತಯಾರಿ, ಆಸ್ತಿ ತೆರಿಗೆ ಸಂಗ್ರಹ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಶನಿವಾರ ರಾಕೇಶ್ ಸಿಂಗ್ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. 

ಸಭೆಯಲ್ಲಿ, ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯಲ್ಲಿ ಕಾರ್ಯೋನ್ಮುಖರಾಗಬೇಕು. ಸೋಂಕಿತರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವುದರ ಜೊತೆಗೆ ಲಸಿಕೆ ನೀಡುವುದು ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡುವ ಕಾರ್ಯದಲ್ಲಿ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. 

ಇನ್ನೆರಡು ತಿಂಗಳಲ್ಲಿ ಮಳೆಗಾಲ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ರಸ್ತೆ ಬದಿಯ ಚರಂಡಿಗಳಿಂದ ತೆಗೆದಿರುವ ಹೂಳನ್ನು ಕೂಡಲೇ ತೆರವು ಮಾಡಬೇಕು. ನಗರದ ಪಾದಚಾರಿ ಮಾರ್ಗಗಳಲ್ಲಿ ಮುರಿದಿರುವ ಕರ್ಬ್ ಸ್ಟೋನ್ಸ್, ಸ್ಲಾಬ್ ಗಲನ್ನು ಕೂಡಲೇ ತೆರವುಗೊಳಿಸಿ ಪಾದಚಾರಿಗಳ ಓಡಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮಾಡಬೇಕು. ರಸ್ತೆ ಬದಿ ಸುರಿದಿರುವ ಕಟ್ಟಡ ತ್ಯಾಜ್ಯಗಳನ್ನು ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು. 

ಮಳೆಗಾಲ ಎದುರಿಸಲು ಕೈಗೊಂಡಿರುವ ಸಿದ್ಧತೆ ಬಗ್ಗೆ ತಿಳಿಸಿದ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಮಳೆಗಾಲದಲ್ಲಿ ತ್ವರಿತವಾಗಿ ಸ್ಪಂದಿಸಲು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಒಂದೊಂದು ನಿಯಂತ್ರಣ ಕೊಠಡಿಗಳಿವೆ. ಮಳೆಗಾಲದ ನಾಲ್ಕು ತಿಂಗಳುಗಳ ಕಾಲ ವಾರ್ಡ್ ಮಟ್ಟದಲ್ಲಿ 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp