ರಾಜ್ಯದಲ್ಲಿ ಕೊರೋನಾ ಸ್ಫೋಟ: ಬೆಂಗಳೂರಿನಲ್ಲಿ 2,787 ಸೇರಿ 4,553 ಮಂದಿಗೆ ಪಾಸಿಟಿವ್, 15 ಸಾವು

ರಾಜ್ಯದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು 4,553 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ.

Published: 04th April 2021 06:50 PM  |   Last Updated: 04th April 2021 06:50 PM   |  A+A-


COVID-19 Positive cases

ಕೊರೋನಾ ಪ್ರಕರಣಗಳು

Posted By : Srinivas Rao BV
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು 4,553 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 15 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,625ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 2,787 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,47,031ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 2,060ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,63,419ಕ್ಕೆ ಏರಿಕೆಯಾಗಿದೆ. ಇನ್ನು 39,092 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 331 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Stay up to date on all the latest ರಾಜ್ಯ news
Poll
Omicron

ಮಾಲ್‌ಗಳು/ಥಿಯೇಟರ್‌ಗಳಿಗೆ ಭೇಟಿ ನೀಡಲು ಎರಡು ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಿರುವುದು ಸರಿಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp