ಪ್ರತಿದಿನ ವಿಚಾರಣೆ ನೆಪದಲ್ಲಿ ಕಿರುಕುಳ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ- ಆಯುಕ್ತರಿಗೆ ಸಿಡಿ ಲೇಡಿ ಪತ್ರ!

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ, ಪ್ರತಿ ದಿನ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸಿಡಿ ಲೇಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಬರೆದಿರುವ ಪತ್ರ  ಸಾಕಷ್ಟು  ಸಂಚಲನ ಉಂಟುಮಾಡಿದೆ.

Published: 04th April 2021 02:37 PM  |   Last Updated: 04th April 2021 02:37 PM   |  A+A-


CD_LADY1

ಸಿಡಿ ಲೇಡಿ

Posted By : Nagaraja AB
Source : Online Desk

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ, ಪ್ರತಿ ದಿನ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸಿಡಿ ಲೇಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಬರೆದಿರುವ ಪತ್ರ  ಸಾಕಷ್ಟು  ಸಂಚಲನ ಉಂಟುಮಾಡಿದೆ.

ನಿರಂತರವಾಗಿ ನನ್ನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆ ಮಾಡುತ್ತಿಲ್ಲ. ಎಸ್ ಐಟಿ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದಿದ್ದು, ನನ್ನನ್ನು  ಆರೋಪಿ ಸ್ಥಾನದಲ್ಲಿ ಇರಿಸಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ. ನನ್ನ ಚಾರಿತ್ರ್ಯವಧೆ ಮಾಡುವಂತಹ ಪ್ರಯತ್ನವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಸಿಡಿಲೇಡಿ ಬರೆದಿದ್ದಾರೆ.

ಮಹಜರು ವೇಳೆಯಲ್ಲಿ ಆರ್ ಟಿ ನಗರದಲ್ಲಿನ  ಪಿಜಿಯಲ್ಲಿ ಸಾಕ್ಷ್ಯ ನಾಶಪಡಿಸಲಾಗಿದೆ. ನನ್ನ ಒಪ್ಪಿಗೆ ಇಲ್ಲದಿದ್ದರೂ ಸರ್ಕಾರಿ ವಿಶೇಷ ಅಭಿಯೋಜಕರನ್ನು ನೇಮಕ ಮಾಡಲಾಗಿದೆ. ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರಲಿದ್ದಾರೆ ಎಂಬ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಕೂಡಾ ನನಗೆ ಆಘಾತವನ್ನುಂಟು ಮಾಡಿದೆ. ಪ್ರಕರಣದಲ್ಲಿ ಬೇರೆ ಬೇರೆ ರೀತಿಯ ಹೆಸರನ್ನು ತಳುಕು ಹಾಕುವ ಮೂಲಕ ತನಿಖೆ ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp