ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್, ಐಸಿಯುಗೆ ಶಿಫ್ಟ್!

ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ. 

Published: 05th April 2021 11:44 AM  |   Last Updated: 05th April 2021 02:49 PM   |  A+A-


Ramesh jarkiholi

ರಮೇಶ್ ಜಾರಕಿಹೊಳಿ

Posted By : Vishwanath S
Source : Online Desk

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ. 

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದರು. 

ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರ ಪ್ರಕಾರ, ಜಾರಕಿಹೊಳಿ ಬೆಂಗಳೂರು ಮತ್ತು ಮಹಾರಾಷ್ಟ್ರ ಪ್ರವಾಸದಿಂದ ಹಿಂದಿರುಗಿದ ಕೂಡಲೇ ಶೀಘ್ರವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಈ ವೇಳೆ ಕೊರೋನಾ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆ ಎದುರಿಸಿದ್ದು ಹೀಗಾಗಿ ಅವರಿಗೆ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. 

ಏಪ್ರಿಲ್ 1ರಂದು ಆಸ್ಪತ್ರೆಗೆ ಬಂದಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿತ್ತು ಎಂದು ಗೋಕಾಕ್ ಆಸ್ಪತ್ರೆಯ ಟಿಹೆಚ್ ಒ ಡಾ. ಮುತ್ತಣ್ಣ ಕೋಪದ್ ಹೇಳಿದ್ದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp