ಕರ್ನಾಟಕ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ 'ಸುಪ್ರೀಂ' ತಡೆ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.

Published: 05th April 2021 12:39 PM  |   Last Updated: 05th April 2021 12:42 PM   |  A+A-


CM BS Yediyurappa

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Srinivasamurthy VN
Source : PTI

ನವದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಆದರೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಎಸ್ ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. 

ಇದೀಗ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ತಡೆ ನೀಡಿದೆ. ಐಟಿ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಆರೋಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಕೇಳಿಬಂದಿತ್ತು. ನಂತರ ಲೋಕಾಯುಕ್ತ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು.

ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಯಡಿಯೂರಪ್ಪ ವಿರುದ್ಧ 2011ರಲ್ಲಿ ಉದ್ಯಮಿ ಅಲಂ ಪಾಷಾ ದೂರು ಸಲ್ಲಿಸಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ ಜತೆ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಆರೋಪ ಎದುರಿಸುತ್ತಿದ್ದಾರೆ.

ಏನಿದು ಪ್ರಕರಣ?
 2000-2001ರಲ್ಲಿ ಬೆಳ್ಳಂದೂರು, ದೇವರಬಿಸನಹಳ್ಳಿ, ವರ್ತೂರು, ವೈಟ್ ಫೀಲ್ಡ್​ ಸುತ್ತಮುತ್ತಲಿನ ಸುಮಾರು 500 ಎಕರೆ ಭೂಮಿಯಲ್ಲಿ ಐಟಿ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಘೋಷಿಸಿತ್ತು. ಕೆಐಡಿಬಿ ಭೂ ಸ್ವಾಧೀನಕ್ಕೆ ಅಧಿಸೂಚನೆಯನ್ನೂ ಹೊರಡಿಸಿತ್ತು. ಕೆಐಡಿಬಿ ಅಧಿಸೂಚನೆ ಹೊರಡಿಸಿದ ಬಳಿಕ ಈ ಪೈಕಿ ಒಂದಿಷ್ಟು ಜಾಗವನ್ನು 2006ರಲ್ಲಿ (ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ) ಡೀನೋಟಿಫೈ ಮಾಡಲಾಗಿದೆ. ಪ್ರಿಲಿಮಿನರಿ ನೋಟಿಫಿಕೇಶನ್​ಗೂ ಮುನ್ನ ಡಿನೋಟಿಫಿಕೇಶನ್ ಮಾಡಲು ಅವಕಾಶ ಇದೆ. ಆದರೆ, ಕೆಐಎಡಿಬಿ ಸ್ವಾಧೀನಕ್ಕೆ ತೆಗೆದುಕೊಂಡ ಮೇಲೆ ಮಾಡಿದರೆ ಅಕ್ರಮ ಆಗುತ್ತದೆ. ಇಲ್ಲಿ ಸಿಎಂ ಮೇಲೆ ಕೆಐಡಿಬಿ ಸ್ವಾಧೀನ ಮಾಡಿಕೊಂಡ ಮೇಲೆ ಡಿನೋಟಿಫಿಕೇಶನ್ ಮಾಡಿದ ಆರೋಪವಿದೆ. ಈ ಸಂಬಂಧ ವಾಸುದೇವರೆಡ್ಡಿ ಎಂಬುವರು ದೂರು ದಾಖಲಿಸಿದ್ದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp