ಕೊಡಗು: ಮಲ್ದಾರೆ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು, ನೂರಾರು ಹಾವುಗಳು ಸುಟ್ಟು ಭಸ್ಮ

ಕೊಡಗು ಜಿಲ್ಲೆ ವಿರಾಜಪೇಟೆ ಹಾಗೂ ಕುಶಾಲನಗರ ಅರಣ್ಯ ವಲಯದ ಮಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದರೂ ಸುಮಾರು 15 ಎಕರೆ ಅರಣ್ಯ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.
ಕಾಳ್ಗಿಚ್ಚು
ಕಾಳ್ಗಿಚ್ಚು

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ಹಾಗೂ ಕುಶಾಲನಗರ ಅರಣ್ಯ ವಲಯದ ಮಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದರೂ ಸುಮಾರು 15 ಎಕರೆ ಅರಣ್ಯ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.

ಹೆಚ್ಚಿನ ತಾಪಮಾನದಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ದುರಂತದಲ್ಲಿ ಹಲವಾರು ಹಾವುಗಳ ಮೃತ ದೇಹಗಳು ಪತ್ತೆಯಾಗಿದ್ದು, ಇತರ ಕಾಡು ಪ್ರಾಣಿಗಳು ಸುರಕ್ಷಿತ ಸ್ಥಳಗಳಿಗೆ ಪಲಾಯನವನ್ನು ಮಾಡಿವೆ ಎಂದು ಮೂಲಗಳು ತಿಳಿಸಿದೆ.

ಮುಂಜಾಗ್ರತಾ ಕ್ರಮವಾಗಿ ಮಲ್ಡಾರೆ ಅರಣ್ಯ ಸಿಬ್ಬಂದಿ ಘಟನಾ ಸ್ಥಳದಲ್ಲಿ ಜಾಗೃತರಾಗಿ ಕಾಯುತ್ತಿದ್ದಾರೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com