ಮರ್ಯಾದಾ ಹತ್ಯೆ: ತಂಗಿ ಕೊಂದು ರೈಲ್ವೇ ಹಳಿ ಮೇಲೆ ಎಸೆದ ಸಹೋದರ!

ಒಡಹುಟ್ಟಿದ ಅಣ್ಣನೇ ತಂಗಿಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

Published: 06th April 2021 11:09 AM  |   Last Updated: 06th April 2021 11:09 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಒಡಹುಟ್ಟಿದ ಅಣ್ಣನೇ ತಂಗಿಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಹೆಣ್ಣೂರಿನ ಟಿಎನ್‌ಟಿ ಲೇಔಟ್‌ ನಿವಾಸಿ ಮಂಗಳಾ ರವಿ (19) ಕೊಲೆಯಾದ ಯುವತಿಯಾಗಿದ್ದಾಳೆ. ಕಿರಣ್ (24 ತಂಗಿಯನ್ನೇ ಹತ್ಯೆಗೈದ ಸಹೋದರನಾಗಿದ್ದಾನೆ. 

ಹತ್ಯೆ ಮಾಡಿದ ಬಳಿಕ ಆರೋಪಿ ಮೃತ ದೇಹವನ್ನು ರೈಲ್ವೆ ಹಳಿ ಮೇಲೆ ಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಎಂದು ತಿಳಿದುಬಂದಿದೆ.

ಮಂಗಳಾ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದು, ತಾಯಿ ಹಾಗೂ ಸಹೋದರನ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಕಿರಣ್‌ ಆಟೋ ಚಾಲಕನಾಗಿದ್ದ. ಮಂಗಳಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಅಲ್ಲದೆ, ಆಗಾಗ ಆತನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಚಾರ ತಿಳಿದು ಕಿರಣ್‌ ಎಚ್ಚರಿಕೆಯನ್ನೂ ನೀಡಿದ್ದ. ಕೆಲ ದಿನಗಳ ಹಿಂದೆ ಮಂಗಳಾ ಮತ್ತೆ ಪ್ರಿಯಕರನೊಂದಿಗೆ ಹೋಗಿರುವುದನ್ನು ಕಿರಣ್ ನೋಡಿದ್ದಾಳೆ. ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡು ಮನೆಯಲ್ಲಿ ಸಹೋದರಿಯನ್ನು ಹತ್ಯೆ ಮಾಡಿದ್ದಾರೆ. 

ಬಳಿಕ ತನ್ನ ಆಟೋದಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಿ ಬೈಯಪ್ಪನಹಳ್ಳಿ ರೈಲ್ವೇ ಹಳಿ ಮೇಲೆ ಎಸೆದಿದ್ದಾನೆ. ಬಳಿಕ ಆತ್ಮಹತ್ಯೆ ನಾಟಕವಾಡಿದ್ದಾನೆ. 

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಾಯಿ ಹಾಗೂ ಸಂಬಂಧಿಕರ ಪಾತ್ರದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. 


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp