ಮಹಾಮಾರಿ ಕೊರೋನಾ ವಿರುದ್ಧ ಹೋರಾಟ: ಮಾರ್ಷಲ್'ಗಳಿಗೆ ಗೃಹ ರಕ್ಷಕ ದಳ ಸಾಥ್

ನಗರದಲ್ಲಿ ಕೊರೋನಾ ಸೋಂಕಿನ ಪ್ರಕಱಣಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದರೂ, ಕೋವಿಡ್ ಮಾರ್ಗಸೂಚಿ ಪಾಲಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜನರಿಗೆ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮಾಡುವ ನಿಲ್ಲಿನಲ್ಲಿ ಬಿಬಿಎಂಪಿ ಮಾರ್ಷಲ್ ಗಳಿಗೆ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಕೂಡ ಸಾಥ್ ನೀಡಲಿದ್ದಾರೆ. 

Published: 07th April 2021 09:22 AM  |   Last Updated: 07th April 2021 01:35 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನ ಪ್ರಕಱಣಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದರೂ, ಕೋವಿಡ್ ಮಾರ್ಗಸೂಚಿ ಪಾಲಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜನರಿಗೆ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮಾಡುವ ನಿಲ್ಲಿನಲ್ಲಿ ಬಿಬಿಎಂಪಿ ಮಾರ್ಷಲ್ ಗಳಿಗೆ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಕೂಡ ಸಾಥ್ ನೀಡಲಿದ್ದಾರೆ. 

ನಗರದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಅಭಿಯಾನ, ಹಾಸಿಗೆ ಲಭ್ಯತೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ನಗರದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆ ಹೆಚ್ಚಾಗುತ್ತಿದೆ. ಈಗಾಗಲೇ ಮಾರ್ಷಲ್ ಗಳು, ಪೊಲೀಸರು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿದ್ದಾರೆ. ಇವರೊಂದಿಗೆ ಸೋಂಕಿನ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಲು ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಕೂಡ ಕೈಜೋಡಿಸಲಿದ್ದಾರೆಂದು ಹೇಳಿದ್ದಾರೆ. 

ಈಗಾಗಲೇ ಈ ಕುರಿತು ಆರ್'ಡಬ್ಳ್ಯೂಎ, ಆಶಾ ಕಾರ್ಯಕರ್ತೆಯರು, ಹಾಗೂ ಖಾಗಸಿ ಆಸ್ಪತ್ರಗಳ ಸಹಕಾರವನ್ನು ಕೋರಲಾಗಿದೆ. ಈ ಕುರಿತು ಸಭೆಗಳನ್ನೂ ನಡೆಸಲಾಗುತ್ತಿದೆ. ಕೆಲ ಸಂಘಟನೆಗಳು ಕೋವಿಡ್ ಕೇರ್ ಕೇಂದ್ರಗಳ ಸ್ಥಾಪನಗೆ ಅಪಾರ್ಟ್'ಮೆಂಟ್, ಹೋಟೆಲ್ ರೂಮ್ ಗಳು ಹಾಗೂ ಹಾಸ್ಟೆಲ್ ರೂಮ್ ಗಳನ್ನು ನೀಡಲು ಮುಂದೆ ಬಂದಿವೆ. ಬುಧವಾರ ಬೆಂಗಳೂರಿಗೆ 2 ಲಕ್ಷ ಕೊರೋನಾ ಲಸಿಕೆಗಳು ಬರಲಿವೆ. ನಗರದಲ್ಲಿ ಲಸಿಕೆ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

ಹೆಚ್ಚೆಚ್ಚು ಸೋಂಕಿರುವ ಪ್ರದೇಶಗಳಲ್ಲಿ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ. ವಾರ್ಡ್‌ಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಾಗಿ ಪರೀಕ್ಷೆಗಳನ್ನು ನಡೆಸುವುದರ ಜೊತೆಗೆ ಅಪಾರ್ಟ್‌ಮೆಂಟ್ ಗಳಲ್ಲಿ ಪಾಸಿಟಿವಿಟಿ ದರವನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸು ಮಾಡಿದ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಶೇ.20ರಷ್ಟು ಹಾಸಿಗೆಗಳನ್ನು ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. 

ರಾಜ್ಯ ಸರ್ಕಾರದ ಆದೇಶದಂತೆ ದೇಶದ 4 ರಾಜ್ಯಗಳಿಂದ ಬರುವವರಿಗೆ ಆರ್'ಟಿ-ಪಿಸಿಆರ್ ಪರೀಕ್ಷೆಯ ವರದಿ ಕಡ್ಡಾಯವೆಂದು ತಿಳಿಸಲಾಗಿದೆ. ಇತರೆ ರಾಜ್ಯಗಳಿಂದ ಬರುವವರಿಗೂ ನಿಯಮ ಅನ್ವಯಿಸುವ ಕುರಿತು ಮಾತುಕತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp