ರಾಜ್ಯದಲ್ಲಿ ಇಂದು ಕೊರೋನಾದಿಂದ 35 ಸಾವು, ಬೆಂಗಳೂರಿನಲ್ಲಿ 4,991 ಸೇರಿ 6,976 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ಪ್ರಸರಣ ಪ್ರಮಾಣ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, 6,976 ಮಂದಿಗೆ ಪಾಸಿಟಿವ್ ಪ್ರಕರಣಗಳು ಏ.07 ರಂದು ವರದಿಯಾಗಿವೆ. 

Published: 07th April 2021 07:57 PM  |   Last Updated: 07th April 2021 07:59 PM   |  A+A-


Covid-19 Pandemic

ಕೋವಿಡ್-19 ಸೋಂಕು

Posted By : Srinivas Rao BV
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ಪ್ರಸರಣ ಪ್ರಮಾಣ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, 6,976 ಮಂದಿಗೆ ಪಾಸಿಟಿವ್ ಪ್ರಕರಣಗಳು ಏ.07 ರಂದು ವರದಿಯಾಗಿವೆ. 

ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರದ ಗಡಿಯಲ್ಲಿದ್ದು, 4,991 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ  4,60,016ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 25 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 2,794 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,71,556ಕ್ಕೆ ಏರಿಕೆಯಾಗಿದೆ. ಇನ್ನು 49,254ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 353 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp