ಸಿಲಿಕಾನ್ ಸಿಟಿಯಲ್ಲಿ ತಾಯಿ, ಮಗನ ಬರ್ಬರ ಹತ್ಯೆ

ಸಿನಿಮೀಯ ಶೈಲಿಯಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ, ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಜೆ.ಪಿ.ನಗರದಲ್ಲಿ ತಡರಾತ್ರಿ ನಡೆದಿದೆ.

Published: 08th April 2021 12:32 PM  |   Last Updated: 08th April 2021 01:12 PM   |  A+A-


Murder (image for representation purpose)

ಹತ್ಯೆ (ಸಾಂಕೇತಿಕ ಚಿತ್ರ)

Posted By : Srinivas Rao BV
Source : UNI

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ, ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಜೆ.ಪಿ.ನಗರದಲ್ಲಿ ತಡರಾತ್ರಿ ನಡೆದಿದೆ.

ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ 75 ವರ್ಷದ ಮಮತಾ ಬಸು ಮತ್ತು ಅವರ ಪುತ್ರ ದೇವ ಬ್ರತಾ ಮೆಹರ(41) ಎಂಬುವವರನ್ನು ಹತ್ಯೆಗೈದಿದ್ದಾರೆ. ಒರಿಸ್ಸಾ ಮೂಲದ ದೇವ ಬ್ರತಾಗೆ ನಗರ ಕಾಲೇಜುವೊಂದರಲ್ಲಿ ಉಪನ್ಯಾಸಕ ವೃತ್ತಿ ಲಭಿಸಿತ್ತು. ಹೀಗಾಗಿ ಕಳೆದ 20 ದಿನಗಳಿಂದ ಜೆಪಿ ನಗರದ ಸಂತೃಪ್ತಿ ನಗರದ ಪುಟ್ಟೇನಹಳ್ಳಿಯಲ್ಲಿ ವಾಸವಾಗಿದ್ದರು.
ದ್ವಿಚಕ್ರ ವಾಹನದಲ್ಲಿ ಬಂದಿದ್ದ ದರೋಡೆಕೋರರು ಮನೆಗೆ ನುಗ್ಗಿ ಇಬ್ಬರನ್ನು ಕೊಲೆ ಮಾಡಿ ಮನೆಯಲ್ಲಿದ್ದ ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಚಿನ್ನಾಭರಣ, ಎಟಿಎಂ ಕಾರ್ಡ್ ದೋಚಿ ಪರಾರಿಯಾಗಿದ್ದಾರೆ.

ತಡರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ‌. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್ ಮತ್ತು ಶ್ವಾನ ದಳ ಭೇಟಿ ನೀಡಿದೆ. ಅಲ್ಲದೇ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರೋಡೆಕೋರರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp