ರಾಜ್ಯದಲ್ಲಿ ಇಂದು ಕೊರೋನಾಗೆ 36 ಬಲಿ, ಬೆಂಗಳೂರಿನಲ್ಲಿ 4,422 ಸೇರಿ 6,570 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 6570 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,40,130ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 6570 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,40,130ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 36 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,767ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,422 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,64,438ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 22 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 2393 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,73,949ಕ್ಕೆ ಏರಿಕೆಯಾಗಿದೆ. ಇನ್ನು 53, 395 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 357 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com