ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಬೇಡಿ, ಕೆಲಸಕ್ಕೆ ಹಾಜರಾಗಿ: ಮುಷ್ಕರ ನಿರತ ಸಾರಿಗೆ ಇಲಾಖೆ ನೌಕರರಿಗೆ ಸಂಸದ ಪ್ರತಾಪ್ ಸಿಂಹ ಮನವಿ 

ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದೆ, ಹೀಗಾಗಿ ಈ ಸಮಯದಲ್ಲಿ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

Published: 08th April 2021 09:25 AM  |   Last Updated: 08th April 2021 09:25 AM   |  A+A-


Pratap Simha

ಪ್ರತಾಪ್ ಸಿಂಹ

Posted By : Sumana Upadhyaya
Source : Online Desk

ಮೈಸೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದೆ, ಹೀಗಾಗಿ ಈ ಸಮಯದಲ್ಲಿ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ಈ ರೀತಿ ಮುಷ್ಕರ, ಪ್ರತಿಭಟನೆ ಮಾಡಿದರೆ ಖಾಸಗೀಕರಣದ ಕೂಗು ಕೇಳಿಬರುತ್ತಿದೆ. ಜನರು ಖಾಸಗೀಕರಣ ಮಾಡಿ ಎಂದು ಹೇಳುತ್ತಿದ್ದಾರೆ. ಆಗ ನಿಮಗೆ ತೊಂದರೆಯಾಗುತ್ತದೆ, ಜನರ ಪ್ರೀತಿ ವಿಶ್ವಾಸ ಕಳೆದುಕೊಳ್ಳಬೇಡಿ, ಮುಷ್ಕರ ಹೀಗೆ ಮುಂದುವರಿದರೆ ಎಸ್ಮಾ ಜಾರಿ ಮಾಡಬೇಕಾಗುತ್ತದೆ, ಆ ಪರಿಸ್ಥಿತಿಗೆ ತಂದೊಡ್ಡಬೇಡಿ, ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಹಾಜರಾಗಿ ಎಂದು ನೌಕರರಿಗೆ ಮನವಿ ಮಾಡಿಕೊಂಡರು.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರ ಸಾರಿಗೆ ಇಲಾಖೆ ನೌಕರರ ಬೇಡಿಕೆ ಈಡೇರಿಸಲಿ ಎಂದು ಹೇಳುತ್ತಿದ್ದಾರೆ, ಹಾಗಾದರೆ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಬಹುದಾಗಿತ್ತಲ್ಲವೇ, ಏಕೆ ಅವರು ನೌಕರರ ಬೇಡಿಕೆ ಈಡೇರಿಸಲಿಲ್ಲ ಎಂದು ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರೈತರ ದಾರಿ ತಪ್ಪಿಸಿದಂತೆ ಸಾರಿಗೆ ಇಲಾಖೆ ನೌಕರರ ದಾರಿಯನ್ನು ತಪ್ಪಿಸುತ್ತಿದ್ದಾರೆ ಎಂದರು. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp