ಅಪಾರ್ಟ್ ಮೆಂಟ್ ಗಳಲ್ಲಿನ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ಬಳಕೆಗೆ ಪೊಲೀಸರ ನಿಷೇಧ

ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿರುವ ಸ್ವಿಮ್ಮಿಂಗ್ ಪೂಲ್, ಜಿಮ್ ಹಾಗೂ ಪಾರ್ಟಿ ಹಾಲ್ ಗಳನ್ನು ಬಳಸದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Published: 08th April 2021 11:35 AM  |   Last Updated: 08th April 2021 01:23 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿರುವ ಸ್ವಿಮ್ಮಿಂಗ್ ಪೂಲ್, ಜಿಮ್ ಹಾಗೂ ಪಾರ್ಟಿ ಹಾಲ್ ಗಳನ್ನು ಬಳಸದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬುಧವಾರ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ, ಇನ್ನೂ ಕೊರೋನಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾಣಸವಾಡಿಯಲ್ಲಿರುವ ಕಂಥಹಾರಿ ರೆಸ್ಟೋರೆಂಟ್ ಬಂದ್ ಮಾಡಿ 15 ಸಾವಿರ ರು ದಂಡ ವಿಧಿಸಿದ್ದಾರೆ.

ಕೋರಮಂಗಲದಲ್ಲಿಯೂ ಎರಡು ಸೂಪರ್ ಮಾರ್ಕೆಟ್ ಮತ್ತು ಎರಡು ಹೋಟೆಲ್ ಗಳನ್ನು ಮುಚ್ಚಿಸಲಾಗಿದೆ, ಎಚ್ ಎಸ್ ಆರ್ ಲೇಔಟ್  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾಯ್ದೆ ಅನ್ವಯ ಹೋಟೆಲ್ ಒಂದನ್ನು ಮುಚ್ಚಿಸಲಾಗಿದೆ.
 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp