ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ರಕ್ಷಣೆ: ಸಚಿವ ಬೊಮ್ಮಾಯಿ ಭರವಸೆ

ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Published: 08th April 2021 01:24 PM  |   Last Updated: 08th April 2021 01:24 PM   |  A+A-


Basaravaraj bommai

ಬಸವರಾಜ್ ಬೊಮ್ಮಾಯಿ

Posted By : Manjula VN
Source : UNI

ಹುಮ್ನಾಬಾದ್: ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರರೊಂದಿಗೆ ಮಾತನಾಡಿದಂತ ಸಚಿವರು, ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು. ಸರಕಾರದ ಕೆಲಸ. ಈ ಸಂಬಂಧ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ . ಪ್ರಯಾಣಿಕರು ಪರಿತಪಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಷ್ಕರದಿಂದ ಸಾರಿಗೆ ಸಂಸ್ಥೆಗೂ ಬಹಳ ದೊಡ್ಡಮಟ್ಟದ ನಷ್ಟವಾಗುತ್ತಿದೆ. ಸಾರಿಗೆ ಸಂಸ್ಥೆ ಉಳಿಯಬೇಕು. ನೌಕರರಿಗೂ ಒಳ್ಳೆಯ ಸಂಬಳ ಸಿಗಬೇಕೆಂದರೆ ಅದು ದುಡಿಮೆಯಿಂದ ಮಾತ್ರ ಸಾಧ್ಯ ಎಂದು ಸಚಿವರು ಹೇಳಿದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp