ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ: ಆರ್ ಟಿಇ ಸೀಟು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಆರ್ ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳ ಸೀಟಿಗಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 20ರವರೆಗೆ  ಶಿಕ್ಷಣ ಇಲಾಖೆ ವಿಸ್ತರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆರ್ ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳ ಸೀಟಿಗಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 20ರವರೆಗೆ  ಶಿಕ್ಷಣ ಇಲಾಖೆ ವಿಸ್ತರಿಸಿದೆ.

14,036  ಆರ್ ಟಿ ಇ ಸೀಟುಗಳಿಗೆ  ಕೇವಲ 10 ಸಾವಿರ ಅರ್ಜಿಗಳು ಮಾತ್ರ ಬಂದಿದ್ದನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು. ಅರ್ಜಿ ಸಲ್ಲಿಸಲು ಈ ಮೊದಲು ಏಪ್ರಿಲ್ 8 ಕೊನೆಯ ದಿನಾಂಕವಾಗಿತ್ತು.

ಪೋಷಕರು ಪ್ರತ್ಯೇಕವಾಗಿ, ಅಥವಾ ಶಾಲಾ ಅಧಿಕಾರಿಗಳ ಮೂಲಕ ಅಥವಾ ಸ್ಥಳೀಯ ಬ್ಲಾಕ್ ಶಿಕ್ಷಣ ಅಧಿಕಾರಿ ಮೂಲಕ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 23 ರಂದು ಈ ಅರ್ಜಿಗಳನ್ನು ಪರಿಶೀಲಿಸುತ್ತಾರೆ. ಅದೇ ದಿನ ವಿಶೇಷ ಅರ್ಜಿಗಳನ್ನು ಪರಿಶೀಲಿಸಲಾಗುವುದು, ಏಪ್ರಿಲ್ 30 ರಂದು ಲಾಟರಿ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ಮೇ 7ರಂದು ಮೊದಲ ಹಂತದ ಸೀಚು ಹಂಚಿಕೆ ಮಾಡಲಾಗುವುದು, ಶಾಲಾ ಶಿಬ್ಬಂದಿ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ ಲೈನ್ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಿದ್ದಾರೆ. 

ಮೇ 31 ರಂದು ಎರಡನೇ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ, ಜೂನ್ 1 ರಿಂದ 10ರೊಳಗೆ ಎರಡನೇ ಹಂತದಲ್ಲಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳು ದಾಖಲಾತಿ ಪಡೆಯಬಹುದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com