ಡಿಸಿಎಂ ಕಾರಜೋಳಗೆ 2ನೇ ಬಾರಿಗೆ ವಕ್ಕರಿಸಿದ ಕೊರೋನಾ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
ಗೋವಿಂದ್ ಕಾರಜೋಳ
ಗೋವಿಂದ್ ಕಾರಜೋಳ

ಬೆಂಗಳೂರು: ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಸಂದರ್ಭದಲ್ಲಿ ವಿಪರೀತ ಮೈ ಕೈ ನೋವು ಕಾಣಿಸಿಕೊಂಡಿತ್ತು. ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಂಡಾಗ ಕೊರೊನಾ ಸೋಂಕು ತಗುಲಿದೆ. 

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವುದರಿಂದ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ವೈದ್ಯರು ವಿಶ್ರಾಾಂತಿ ಪಡೆಯಬೇಕೆಂದು ಸೂಚಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com