ಸಾರಿಗೆ ಸಚಿವರ ತವರು ಜಿಲ್ಲೆಯಲ್ಲೇ ಇಲಾಖೆ ನೌಕರ ಆತ್ಮಹತ್ಯೆ: ಅಧಿಕಾರಿಗಳಿಂದ ಕಿರುಕುಳ ಆರೋಪ 

ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

Published: 09th April 2021 09:13 AM  |   Last Updated: 09th April 2021 09:13 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : The New Indian Express

ಬೆಳಗಾವಿ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

ಹಲವು ಕಡೆಗಳಲ್ಲಿ ನೌಕರರು ತಮ್ಮ ಸಂಕಷ್ಟ, ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ. ಡ್ಯೂಟಿಗೆ ಹಾಜರಾಗದ ಸಿಬ್ಬಂದಿ ವಿರುದ್ಧ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ, ವಸತಿ ಗೃಹಗಳನ್ನು ಬಿಡಲು ಹೇಳುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ.

ಈ ಮಧ್ಯೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಶಿವಕುಮಾರ್ ನೀಲಗಾರ(40 ವರ್ಷ) ಎಂಬ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸವದತ್ತಿ ಪಟ್ಟಣದಲ್ಲಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಸವದತ್ತಿ ಸಾರಿಗೆ ಇಲಾಖೆ ಘಟಕದಲ್ಲಿ ಚಾಲಕ ಕಂ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp