ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: 2.64 ಲಕ್ಷ ರೂ. ದಂಡ ವಸೂಲಿ

ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ಪೂರ್ವ ವಿಭಾಗದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ ವಸೂಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 

Published: 09th April 2021 02:11 PM  |   Last Updated: 09th April 2021 02:18 PM   |  A+A-


Casual_images1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಬೆಂಗಳೂರು: ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ಪೂರ್ವ ವಿಭಾಗದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ ವಸೂಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (ಮುಖ ಗವಸು) ಧರಿಸದಿರುವ ಮತ್ತು  ಸಾಮಾಜಿಕ ಅಂತರ ಕಾಡಿಕೊಳ್ಳದಿರುವವರ ವಿರುದ್ದ ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ  ವಸೂಲಿ ಪ್ರಕರಣಗಳನ್ನು ದಾಖಲಿಸಿ, ಒಟ್ಟು 2.64 ಲಕ್ಷ ರೂ ದಂಡ ವಸೂಲಿ  ಮಾಡಿದ್ದಾರೆ.

ವಾಣಿಜ್ಯ ಮಳಿಗೆಗಳು,  ಹೋಟೆಲ್‍ಗಳು, ಕಾಫಿ ಶಾಫ್‍ಗಳು, ಮಾಲ್‍ಗಳು, ರೆಸ್ಟೋರೆಂಟ್‍ಗಳು, ಇತರೆ ಅಂಗಡಿಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸದೇ  ಇದ್ದ ಒಟ್ಟು 26 ವಿವಿಧ ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸಿದ್ದಾರೆ. 

ಕಡ್ಡಾಯವಾಗಿ ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಉಚಿತ ಮಾಸ್ಕ್ ಗಳನ್ನು ವಿತರಿಸಿದ್ದಾರೆ. ತಮ್ಮ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ ಎಂದು ಅಧಿಕಾರಿಗಳು ಈ ವೇಳೆ ಸಾರ್ವಜನಿಕರಿಗೆ ಮನದಟ್ಟು ಮಾಡಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಎರಡನೇ ಅಲೆ ತ್ರೀವವಾಗಿ ಹರಡುತ್ತಿರುವುದರಿಂದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ ಹಿನ್ನಲೆಯಲ್ಲಿ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp