ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು- ವಿಡಿಯೋ 

ಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಧಗಧಗನೆ ಹೊತ್ತಿ ಉರಿಯುತ್ತಿರುವ ಕಾರು
ಧಗಧಗನೆ ಹೊತ್ತಿ ಉರಿಯುತ್ತಿರುವ ಕಾರು

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆ
ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಇಲ್ಲಿನ  ಇಂಡಿ ಪಂಪ್​ ವೃತ್ತದ ಪೆಟ್ರೋಲ್​ ಬಂಕ್​ನಲ್ಲಿ ಒಮ್ನಿ ವಾಹನವೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿ ಉರಿದಿದೆ. ಒಮ್ನಿ ಚಾಲಕ ಪೆಟ್ರೋಲ್​ ಹಾಕಿಸಿಕೊಂಡು ವಾಹನ ಸ್ಟಾರ್ಟ್​ ಮಾಡುತ್ತಿದ್ದಂತೆ ಇಂಜಿನ್​ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತವಾರಣ ನಿರ್ಮಾಣವಾಗಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಬಂಕ್ ಸಿಬ್ಬಂದಿ, ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಭಾರಿ ಅನಾಹುತ ತಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಹೊತ್ತಿನ ಉರಿಯುತ್ತಿದ್ದ ಕಾರನ್ನು ತಮ್ಮ ಮೊಬೈಲ್ ಗಳಲ್ಲಿ ವಿಡಿಯೋ ಮಾಡಲು ಮುಗಿ ಬೀಳುತ್ತಿದ್ದ ಜನರನ್ನು ಪೊಲೀಸರು ನಿಯಂತ್ರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com