ಕೊರೋನಾ ನೈಟ್ ಕರ್ಫ್ಯೂ: ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ಇಲ್ಲ - ಪೊಲೀಸ್ ಆಯುಕ್ತ ಕಮಲ್ ಪಂತ್

ಕೊರೊನಾ ನೈಟ್ ಕರ್ಫ್ಯೂ ಸಮಯದಲ್ಲಿ ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಕಮಲ್ ಪಂತ್
ಕಮಲ್ ಪಂತ್

ಬೆಂಗಳೂರು: ಕೊರೊನಾ ನೈಟ್ ಕರ್ಫ್ಯೂ ಸಮಯದಲ್ಲಿ ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಇಂದು ರಾತ್ರಿಯಿಂದ ಏ. 20ರವರೆಗೂ ನೈಟ್ ಕರ್ಪ್ಯೂ ಜಾರಿ ಇರುವುದರಿಂದ ರಾತ್ರಿ 10 ನಂತರ ಯಾರೂ ಕೂಡ ಹೊರಗಡೆ ಓಡಾಡುವಂತಿಲ್ಲ ಎಂದರು.

ಇಂದು ರಾತ್ರಿ 9 ರಿಂದ ಪೊಲೀಸರನ್ನು ನಿಯೋಜಿಸಲಾಗುವುದು. 10 ಗಂಟೆಯ ಒಳಗಾಗಿ ನಗರದಲ್ಲಿನ ಎಲ್ಲಾ ಅಂಗಡಿ-ಮುಂಗಟ್ಟುಗಳು ಮುಚ್ಚಿರಬೇಕು ಎಂದು ಅವರು ಎಚ್ಚರಿಕೆ ನೀಡಿದರು.

ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ನೀಡುವುದಿಲ್ಲ. ಆದರೆ, ತುರ್ತು ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ನಗರದಲ್ಲಿನ ಪ್ರಮುಖ ರಸ್ತೆಗಳು ಹಾಗೂ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುವುದು. ನಿಯಮ ಉಲ್ಲಂಘಿಸಿದರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಜರುಗಿಸಲಾಗುವುದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕೋವಿಡ್‌ -19 ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಇಂದಿನಿಂದ ಕೊರೊನಾ ನೈಟ್‌ ಕರ್ಫ್ಯೂ ಜಾರಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com