ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು

ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.

Published: 10th April 2021 07:16 PM  |   Last Updated: 10th April 2021 07:22 PM   |  A+A-


Kota Srinivas Poojary

ಕೋಟ ಶ್ರೀನಿವಾಸ ಪೂಜಾರಿ

Posted By : Vishwanath S
Source : UNI

ಮಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.
 
‘ಕೋವಿಡ್‍ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭಗಳಲ್ಲಿ, ನೀವು ನನಗೆ ಕರೆ ಮಾಡಬಹುದಾಗಿದೆ. ಕಳೆದ ಎರಡು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ಆರ್‍ ಟಿ ಪಿಸಿಆರ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
 
ಈ ತಿಂಗಳ 8 ಮತ್ತು 9 ರಂದು ಕಡಬ ತಾಲ್ಲೂಕಿನ ಪಾಲ್ಟಾಡಿ ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ತಾಯಿಯ ಮನೆಯಲ್ಲಿ ನಡೆದ 'ಧರ್ಮ ನೆಮೋತ್ಸವ'ದಲ್ಲಿ ಭಾಗವಹಿಸಿದ ಗಣ್ಯರಲ್ಲಿ ಶ್ರೀನಿವಾಸ ಪೂಜಾರಿ ಸೇರಿದ್ದರು. ಪೂಜಾರಿಯವರು ಏಪ್ರಿಲ್ 8ರಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp