ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

Published: 11th April 2021 09:14 PM  |   Last Updated: 11th April 2021 09:14 PM   |  A+A-


Casual_Images1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಕಲಬುರಗಿ: ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಭಾಗದ ಸರ್ಕಾರಿ ಕಚೇರಿಗಳು ನಾಳೆಯಿಂದ ಮುಂದಿನ ಎರಡು ತಿಂಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 1-30ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ.

ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್ 1ರಿಂದ ಮೇ 31ರವರೆಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆಗಳ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆದಾಗ್ಯೂ, ಕೋವಿಡ್-19 ಗೆ ಸಂಬಂಧಿಸಿದಂತೆ ತುರ್ತು ಕೆಲಸ ಮಾಡಲು ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಗಳ ಸಿಇಒಗಳಿಂದ ಸೂಚಿಸಲ್ಪಟ್ಟ ನೌಕರರಿಗೆ ಈ ಬದಲಾವಣೆ ಅನ್ವಯವಾಗುವುದಿಲ್ಲ.
 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp