ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಎಲ್ಲೆಂದರಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸುತ್ತಿರುವ ಪೊಲೀಸರು
ಎಲ್ಲೆಂದರಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸುತ್ತಿರುವ ಪೊಲೀಸರು

ಕಲಬುರಗಿ: ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಕಲಬುರಗಿಯಲ್ಲಿ ಕರ್ಫ್ಯೂ ವೇಳೆಯಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿದ್ದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಕಟ್ಟು ನಿಟ್ಟಾಗಿ  ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸುತ್ತಿದ್ದು, ಯಾವುದೇ ಕಾರಣಕ್ಕೂ ಜನರು ಮನೆಯಿಂದ ಹೊರಗೆ ಬಾರದಂತೆ ಡಿಸಿಪಿ ಕಿಶೋರ್ ಬಾಬು ಮನವಿ ಮಾಡಿಕೊಂಡಿದ್ದಾರೆ.

ಕೆಲವೊಂದು ರಿಯಾಯಿತಿಗಳನ್ನು ನೈಟ್‌ ಕರ್ಪ್ಯೂನಲ್ಲಿ ನೀಡಲಾಗಿದೆ. ಅನಗತ್ಯ ಓಡಾಟಕ್ಕೆ ಮಾತ್ರ ನಿರ್ಬಂಧ ಹೇರಲಾಗಿದ್ದು ಉಳಿದಂತೆ ಅಗತ್ಯ ಸೇವೆಗೆ ಯಾವುದೇ ರೀತಿಯ ಅಡ್ಡಿ ಆತಂಕ ಎದುರಾಗುವುದಿಲ್ಲ. ರಾತ್ರಿ ಕರ್ಫ್ಯೂ ಇದೇ ತಿಂಗಳ 20ರವರೆಗೂ ಇರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com