ಇಂದಿನಿಂದ 4 ದಿನ ಲಸಿಕೆ ಉತ್ಸವ: ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಬಹುದೊಡ್ಡ ಅಸ್ತ್ರ ಎಂದ ಸಿಎಂ ಯಡಿಯೂರಪ್ಪ 

ಕೊರೋನ ಎರಡನೇ ಆಲೆ ಸೃಷ್ಟಿಯಾದ ನಂತರ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಲಸಿಕಾ ಉತ್ಸವ’ ಭಾನುವಾರದಿಂದ ನಾಲ್ಕು ದಿನಗಳ ಕಾಲ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೊರೋನ ಎರಡನೇ ಆಲೆ ಸೃಷ್ಟಿಯಾದ ನಂತರ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಲಸಿಕಾ ಉತ್ಸವ’ ಭಾನುವಾರದಿಂದ ನಾಲ್ಕು ದಿನಗಳ ಕಾಲ ನಡೆಯಲಿದೆ.

ಏಪ್ರಿಲ್ 11ರಿಂದ 14ರವರೆಗೆ 4 ದಿನ ಲಸಿಕಾ ಉತ್ಸವವನ್ನು ದೇಶಾದ್ಯಂತ ಆಚರಿಸಬೇಕು. ಲಸಿಕೆ ಪಡೆಯಲು ಅರ್ಹರಾಗಿರುವ 45 ವರ್ಷ ಮೇಲ್ಪಟ್ಟ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕಾ ಕೇಂದ್ರಗಳಿಗೆ ಕರೆತಂದು ಚುಚ್ಚುಮದ್ದು ಕೊಡಿಸಬೇಕು ಎಂದು ಮುಖ್ಯಮಂತ್ರಿಗಳ ಜೊತೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದರು.

ರಾಜ್ಯದಲ್ಲಿ ಇಂದಿನಿಂದ ಲಸಿಕಾ ಉತ್ಸವ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಭಯ, ಉದಾಸೀನ ಬಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ಲಸಿಕೆ ಹಾಕಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com