ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಡಾ. ಕೆ.ಸುಧಾಕರ್

ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Published: 12th April 2021 02:50 PM  |   Last Updated: 12th April 2021 03:21 PM   |  A+A-


Private Hospitals to reserve 50% beds for Covid patients; Minister Dr.K.Sudhakar

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಡಾ.ಕೆ.ಸುಧಾಕರ್

Posted By : Srinivas Rao BV
Source : Online Desk

ಬೆಂಗಳೂರು: ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, "ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ. 

"ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ" ಎಂದರು.

"ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ". ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ.

ಇದೇ ವೇಳೆ ತಜ್ಞರ ಸಲಹೆ ಬಗ್ಗೆಯೂ ಮಾತನಾಡಿರುವ ಸಚಿವ ಸುಧಾಕರ್, "ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ" ಎಂದರು.

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ, ಕೊರೊನಾ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.

ಬೇವು ಕೋವಿಡ್, ಬೆಲ್ಲ ಲಸಿಕೆ

ಯುಗಾದಿ ಬೆಲ್ಲವೇ ಲಸಿಕೆ. ಬೇವು ಕೋವಿಡ್ ಸೋಂಕು. ಎಲ್ಲರೂ ಬೆಲ್ಲದಂತಿರುವ ಲಸಿಕೆಯನ್ನು ಪಡೆದು ಕೊರೊನಾ ನಿಯಂತ್ರಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp